ಇತರೆ

ಕೊಲ್ಲೂರು: ಸ್ನೇಹಿತರೊಂದಿಗೆ ಈಜಲು ಹೋದ ರಿಕ್ಷಾ ಚಾಲಕ ಸಾವು 

Views: 39

ಕನ್ನಡ ಕರಾವಳಿ ಸುದ್ದಿ:  ಜಡ್ಕಲ್ ಗ್ರಾಮದ ಹಯ್ಯಂಗಾರು ಕಾಗ್ನಿ ಕನ್ಯಾಸ್ತ್ರಿ ಹೊಳೆಗೆ ಈಜಲು ಹೋದ ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್  ನಾಯ್ (32) ಮಾ. 22 ರಂದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಸ್ನೇಹಿತರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ಬಾಬಣ್ಣ ಅವರ ಮೂವರು ಗಂಡು ಮಕ್ಕಳಲ್ಲಿ ಒಬ್ಬರಾಗಿದ್ದಾರೆ.

ಕೊಲ್ಲೂರು ಎಸ್.ಐ. ವಿನಯ ಅವರ ನೇತೃತ್ವದಲ್ಲಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಶೈಲೇಶ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಅನಂತರ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಿದರು.

Related Articles

Back to top button
error: Content is protected !!