ಯುವಜನ
ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜ್ಯನ್ಯ: ಪೋಷಕರು ಪ್ರತಿಭಟನೆ
Views: 18
ಕನ್ನಡ ಕರಾವಳಿ ಸುದ್ದಿ: ಕೋಚಿಂಗ್ ಸೆಂಟರ್‌ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ನಡೆದಿದೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಪೋಷಕರು, ಕೋಚಿಂಗ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿಯರ ಪೋಷಕರು ಆರೋಪಿ ಶಿಕ್ಷಕನ ಬಂಧಿಸಿ ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ತಕ್ಷಣ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






