ಇತರೆ
ಕೋಟ:ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು
Views: 0
ಕನ್ನಡ ಕರಾವಳಿ ಸುದ್ದಿ: ಕೋಟ ರಾಷ್ಟ್ರೀಯ ಹೆದ್ದಾರಿ 66ರ ಗೊಬ್ಬರಬೆಟ್ಟುವಿನ ಬೊಬ್ಬರ್ಯ ಕಟ್ಟೆ ಸಮೀಪ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಆ.24 ರಂದು ಸಂಭವಿಸಿದೆ.
ಗಿಳಿಯಾರು ಮಂಜು ಪೂಜಾರಿ (67) ಮೃತಪಟ್ಟವರು.
ಮಂಜು ಪೂಜಾರಿ ಅವರು ಕೋಟದಿಂದ ಗಿಳಿಯಾರಿಗೆ ಹೋಗಲು ಹೆದ್ದಾರಿ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಉಡುಪಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಂಜು ಪೂಜಾರಿ ಅವರಿಗೆ ನೇರ ಡಿಕ್ಕಿ ಹೊಡೆದಿರುತ್ತಾರೆ.
ಡಿಕ್ಕಿಯ ರಭಸಕ್ಕೆ ಮಂಜು ಪೂಜಾರಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸೇರಿಸಲಾಗಿದೆ. ಪರೀಕ್ಷಿಸಿದ ವೈಧ್ಯರು ಮಂಜು ಪೂಜಾರಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.






