ಆರ್ಥಿಕ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ:15 ಕೆಜಿ ಚಿನ್ನಾಭರಣ ವಶ 

Views: 93

ಕನ್ನಡ ಕರಾವಳಿ ಸುದ್ದಿ: ಮಂಗಳೂರು ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲ್ಲೈ ಮೂಲದ ಮೂವರನ್ನು ಬಂಧಿಸಲಾಗಿದ್ದು, ಅವರಿಂದ 15 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನಕ್ಕೆ 6ಕ್ಕೂ ಹೆಚ್ಚು ವಿಶೇಷ ತಂಡಗಳನ್ನು ರಚಿಸಿ ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.

ಇನ್ಸ್ ಪೆಕ್ಟರ್ ರಾಜೇಂದ್ರನ್ ನೇತೃತ್ವದ ಪೊಲೀಸರ ತಂಡ ನೆಲ್ಲೈಗೆ ಆಗಮಿಸಿದ್ದರು. ಮುರುಗಂಡಿ ಅವರ ಮನೆಯಲ್ಲಿ ಬಚ್ಚಿಟ್ಟಿದ್ದ ಸುಮಾರು 15 ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮುರುಗಂಡಿ ಅವರ 65 ವರ್ಷದ ತಂದೆ ಷಣ್ಮುಗ ಸುಂದರಂ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರೂ ನೆಲ್ಲೈ ಜಿಲ್ಲೆಯವರಾಗಿದ್ದು, ಹಲವು ವರ್ಷಗಳಿಂದ ಅವರು ಮುಂಬೈನಲ್ಲಿ ನೆಲೆಸಿದ್ದರು. ವಿಶೇಷ ಪೊಲೀಸರು ಮೊದಲು ಮುಂಬೈನಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿದರು. ಆತ ನೀಡಿದ ಮಾಹಿತಿ ಮೇರೆಗೆ ನೆಲ್ಲೈಯಲ್ಲಿ ತಲೆಮರೆಸಿಕೊಂಡಿದ್ದ ಮುರುಗಂಡಿ ಹಾಗೂ ಜೋಶುವಾ ಇಬ್ಬರನ್ನೂ ಬಂಧಿಸಿದ್ದಾರೆ.

 

Related Articles

Back to top button