ಕೋಟೇಶ್ವರ:ಕಾಳಾವರ ವರದರಾಜ ಎಂ. ಶೆಟ್ಟಿ ಕಾಲೇಜು: “ಅಂಬೇಡ್ಕರ್ ಜಯಂತಿ” ಆಚರಣೆ

Views: 159
ಕನ್ನಡ ಕರಾವಳಿ ಸುದ್ದಿ: ದಮನಿತರ ಧನಿಯಾಗಿ, ಅಸ್ಪೃಶ್ಯತೆ ಮತ್ತು ಜಾತಿ ಪದ್ಧತಿಯನ್ನು ಹೋಗಲಾಡಿಸಿ ನ್ಯಾಯೋಚಿತವಾಗಿ ಬದುಕುವ ಹಕ್ಕನ್ನು ಸಂವಿಧಾನ ರಚನೆಯ ಮೂಲಕ ಕೊಡಮಾಡಿಸಿದ ಹಿರಿಯ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಸಮೃದ್ಧ ಭಾರತದ ಕನಸು ಕಂಡರು. ಸಾಮರಸ್ಯ, ಸಮಾನತೆ, ಸಹಬಾಳ್ವೆ, ಧಾರ್ಮಿಕ ಸೌಹಾರ್ದತೆ ಇಂದಿನ ಅಗತ್ಯವಾಗಿದ್ದು ಯುವ ಜನತೆ ಇದನ್ನು ಅರ್ಥೈಸಿಕೊಂಡು ಅಂಬೇಡ್ಕರ್‌ರವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಭವ್ಯ ಭಾರತದ ಅಭಿವೃದ್ಧಿಗೆ ಪಣತೊಡಬೇಕೆಂದು ನಾಗರಾಜ ವೈದ್ಯ ಎಂ. ಹೇಳಿದರು.
ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಂಬೇಡ್ಕರ್‌ರವರ ಜೀವನ ಮತ್ತು ಸಾಧನೆಯ ಬಗ್ಗೆ ತಿಳಿಸಿ ಅವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಿರಂಜನ ಶರ್ಮ ನಿರೂಪಿಸಿ, ವಂದಿಸಿದರು. ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.