ಶಿಕ್ಷಣ
ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿ ಪೂರ್ವ ಕಾಲೇಜು: ವಾಲಿಬಾಲ್ ನಲ್ಲಿ ರನ್ನರ್ಸ್

Views: 115
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ವಾಲಿಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಫಲಕಕ್ಕೆ ಭಾಜನರಾಗಿರುತ್ತಾರೆ
ಅವರನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರಕಾಶ್ ಶೆಟ್ಟಿ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿರುವ ಹರೀಶ್ ನಾಯಕ್, ತಂಡದ ಮೇಲ್ವಿಚಾರಕಿಯಾಗಿರುವ ಆಂಗ್ಲ ಭಾಷಾ ಉಪನ್ಯಾಸಕಿ ರೀನಾ ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿ- ಪಾಲಕರು, ಆಡಳಿತ ಮಂಡಳಿ ಮತ್ತು ಸಾರ್ವಜನಿಕರು ಅಭಿನಂದಿಸಿರುತ್ತಾರೆ.
ಈ ಕ್ರೀಡಾಪಟುಗಳಿಗೆ ಸ್ಥಳೀಯ ರೋಟರಿ ಕ್ಲಬ್ ನವರು ಗುಣಮಟ್ಟದ ಸಮಸ್ತವನ್ನು ಕೊಡುಗೆಯಾಗಿ ನೀಡಿದ್ದು ಶ್ಲಾಘನೀಯ.