ಶಿಕ್ಷಣ

ಕೋಟೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನಿಕ ಮೌಲ್ಯಗಳು ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ

“ಯುವ ಮತದಾರರ ಜಾಗೃತಿ, ಬಲಿಷ್ಠ ಪ್ರಜಾಪ್ರಭುತ್ವದ ಭರವಸೆ”- ರಾಘವೇಂದ್ರ ಕಿಣಿ

Views: 37

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ “ಸಂವಿಧಾನಿಕ ಮೌಲ್ಯಗಳು ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ”ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ಬಿದ್ಕಲ್‌ಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ ಅವರು ಸಂವಿಧಾನಿಕ ಮೌಲ್ಯಗಳು, ಪ್ರಜಾಪ್ರಭುತ್ವದ ಮಹತ್ವ ಹಾಗೂ ಮತದಾನದ ಹಕ್ಕಿನ ಜವಾಬ್ದಾರಿಯುತ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ಯುವಶಕ್ತಿಯ ಮತದಾನದಿಂದ ಸದೃಢ ಪ್ರಜಾಪ್ರಭುತ್ವ ನಿರ್ಮಾಣ” ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಂವಿಧಾನದ ಆಶಯಗಳನ್ನು ಗೌರವಿಸುವುದು ಮತ್ತು ಜವಾಬ್ದಾರಿಯುತ ನಾಗರಿಕರಾಗುವುದು ಪ್ರತಿಯೊಬ್ಬರ ಕರ್ತವ್ಯವೆಂದು ತಿಳಿಸಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಭಾಗೀರಥಿ ನಾಯ್ಕ ಅವರು ಸ್ವಾಗತಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಚಾಲಕರಾದ ಶೋಭಾ ಕೆ.ಸಹಾಯಕ ಪ್ರಾಧ್ಯಾಪಕರು ರಾಜ್ಯಶಾಸ್ತ್ರ ವಿಭಾಗ ಸರ್ವರನ್ನೂ ವಂದಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಸೌಮ್ಯ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ರಂಜನ್ (ತೃತೀಯ ಬಿ.ಎ.) ಹಾಗೂ ನಿಸರ್ಗ (ದ್ವಿತೀಯ ಬಿ.ಎ.) ಉಪಸ್ಥಿತರಿದ್ದರು.

ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related Articles

Back to top button
error: Content is protected !!