ಧಾರ್ಮಿಕ
ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ

Views: 319
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 8 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಸದಸ್ಯರ ಪಟ್ಟಿಯನ್ನು ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಸದಸ್ಯ ಹಾಗೂ ಕಾರ್ಯದರ್ಶಿಯಾದ ಡಾ| ಎಂ.ವಿ. ವೆಂಕಟೇಶ ಬಿಡುಗಡೆ ಮಾಡಿದರು.
ಪ್ರಧಾನ ಅರ್ಚಕ ಪ್ರಸನ್ನ ಕುಮಾರ್, ಕೆ.ಎಸ್. ನೇತ್ರಾವತಿ ಕೋಟೇಶ್ವರ, ಉಷಾ ಮಾರ್ಕೋಡು, ಗಾಯತ್ರಿ ಕುಂಭಾಸಿ, ರಾಜೀವ ಶೆಟ್ಟಿ ಮಾಲಾಡಿ, ಡಾ। ಸುಧಾಕರ ನಂಬಿಯಾರ್ ಕೋಟೇಶ್ವರ, ಗಣಪ ಪೂಜಾರಿ ವಕ್ವಾಡಿ, ಹಾಗೂ ಕೆ.ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಅವರನ್ನು ಆಯ್ಕೆ ಮಾಡಲಾಗಿದೆ.
ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ ಅವರ ಸಮ್ಮುಖದಲ್ಲಿ ನಡೆಯಲಿದೆ.