ಶಿಕ್ಷಣ

ಕೋಟೇಶ್ವರ ಸರಕಾರಿ ಪದವಿ ಕಾಲೇಜು: ಬಿ.ಕಾಂ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ 

Views: 149

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ ಶಾಸ್ತ್ರ ವಿಭಾಗದಿಂದ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸಿ.ಎಮ್.ಎ. ಕೋರ್ಸ್ ಮಹತ್ವದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು.

ಉದ್ಯೋಗಕ್ಕಾಗಿ ಪೈಪೋಟಿ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಕೇವಲ ಸರಕಾರಿ ಉದ್ಯೋಗಕ್ಕಾಗಿ ಕಾಯದೇ ವೃತ್ತಿಪರ ಕೋರ್ಸ್ ಆದ ಕೋಸ್ಟ್ ಎಂಡ್ ಮ್ಯಾನೇಜ್‌ಮೆಂಟ್ ಅಕೌಂಟಿಂಗ್‌ನತ್ತ ಗಮನ ಹರಿಸಿದರೆ ಉತ್ತಮ ಸಂಪಾದನೆ ಜೊತೆಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವನ್ನು ಗಳಿಸಬಹುದು ಎಂದು ಜಿ.ಸಿ, ರಾವ್ ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಶ್ರೀ ಸಿ.ಎ, ಸಿ.ಎಮ್‌ಎ, ಜಿ.ಸಿ. ರಾವ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನಾಡಿದರು. ಇನ್ನೋರ್ವ ಅತಿಥಿ ಶ್ರೀ ನರೇಶ್, ಅಧ್ಯಾಪಕರು ಜಿ.ಸಿ. ರಾವ್ ಅಕಾಡೆಮಿ ಬೆಂಗಳೂರು ಇವರು ಕಠಿಣ ಪರಿಶ್ರಮದಿಂದ ಸಿಎಮ್‌ಎ ಕೋರ್ಸ್ನ್ನು ಸುಲಭವಾಗಿ ತೇರ್ಗಡೆಗೊಳ್ಳಬಹುದು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮರಾಯ ಆಚಾರ್ಯ ರವರು ವಹಿಸಿದರು. ಶ್ರೀ ನಾಗರಾಜ ಯು. ಐಕ್ಯೂಎಸಿ ಸಂಚಾಲಕರು, ನಾಗರಾಜ ವೈದ್ಯ ಎಂ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಕು. ಭೂಮಿಕಾ ಹಾಗೂ ಶ್ರೀ ಸುದೀಪ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button