ಕೋಟ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Views: 1
ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತ್ವರಿತ ವಿಶೇಷ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ( 32) ಶಿಕ್ಷೆಗೆ ಗುರಿಯಾಗಿರುವ ಆರೋಪಿ.
ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆರೋಪಿ ಶಾಲೆಗೆ ಹೋಗುವ ಸಮಯ ಆಕೆಯನ್ನು ತನ್ನ ಕಾರಿನಲ್ಲಿ ಬಲತ್ಕಾರವಾಗಿ ಇನ್ನೋವಾ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗಿದ್ದರು.
ಅಲ್ಲಿ ಬಲತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಮಾಡಿ ಆಕೆಯನ್ನ ವಾಪಾಸು ಮನೆಗೆ ಬಿಟ್ಟಿದ್ದನು.
ಇದೇ ವೇಳೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.
ನೊಂದ ಬಾಲಕಿ ಬೇಸರದಲ್ಲಿರುವುದನ್ನು ಗಮನಿಸಿದ ಆಕೆಯ ಮನೆಯವರು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ನೊಂದ ಬಾಲಕಿಯ ಸಾಕ್ಷಿ ಆಧರಿಸಿ ಆರೋಪಿಗೆ ಇಪ್ಪತ್ತು ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದರು.
ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರಾಘವೇಂದ್ರ ವಿಚಾರಣೆ ನಡೆಸಿದ್ದರು. ಕುಂದಾಪುರದ ಸರಕಾರಿ ಅಭಿಯೋಜಕ ಹರಿಶ್ಚಂದ್ರ ವಾದ ಮಂಡಿಸಿದರು.






