ಧಾರ್ಮಿಕ
ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಆನಂದ ಸಿ.ಕುಂದರ್ ಆಯ್ಕೆ

Views: 55
ಕೋಟ: ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ.ಕುಂದರ್ ಅವರು ಸೋಮವಾರ ಜರಗಿದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವರು ಈ ಹಿಂದೆಯೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿದ್ದರು.ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ಸಮಿತಿ ಸದಸ್ಯರಾದ ಗಣೇಶ್ ಕೆ.ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಧಾ ಎ.ಪೂಜಾರಿ, ರತನ್ ಐತಾಳ, ಸುಭಾಷ್ ಶೆಟ್ಟಿ ಗಿಳಿಯಾರು, ಶಿವ ಪೂಜಾರಿ ಮಣೂರು, ಕೆ.ಚಂದ್ರಶೇಖರ್ಆಚಾರ್ಯ ಕೋಟ ಮತ್ತು ಅರ್ಚಕ ಪ್ರತಿನಿಧಿ ಉಪಸ್ಥಿತರಿದ್ದರು.






