ಇತರೆ
ಕೋಟ :ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

Views: 102
ಕನ್ನಡ ಕರಾವಳಿ ಸುದ್ದಿ: ಕೋಟ ರಾಷ್ಟ್ರೀಯ ಹೆದ್ದಾರಿ ಮಣೂರು ರಾಜಲಕ್ಷ್ಮೀ ಸಭಾ ಭವನದ ಬಳಿ ಪಾದ ಚಾರಿ ಮಹಿಳೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಗಿಳಿಯಾರು ಹೊನ್ನಾರಿಯ ಗಿರಿಜಾ ಪೂಜಾರ್ತಿ (65) ಮೃತಪಟ್ಟ ಮಹಿಳೆ
ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಚಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದು ತಿಳಿದುಬಂದಿದೆ.