ಇತರೆ

ಕೋಟ: ಕಾರು, ರಸ್ತೆ ಸಾರಿಗೆ ವೋಲ್ವೋ ಬಸ್ ನಡುವೆ ಅಪಘಾತ – ಓರ್ವ ಗಂಭೀರ ಗಾಯ

Views: 171

ಕೋಟ: ಕಾರು ಹಾಗೂ ರಸ್ತೆ ಸಾರಿಗೆ ವೋಲ್ವೋ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ  ರಾಜಲಕ್ಷ್ಮಿ ಹಾಲ್ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಉಡುಪಿ ಮೂಲದ ಗೌತಮ್ ಪಿ ಪ್ರಭು (35) ಎಂದು ಗುರುತಿಸಲಾಗಿದೆ.

ಗೌತಮ್ ಅವರು ತನ್ನ ಇನ್ನೋವಾ ಕಾರಿನಲ್ಲಿ ಗಂಗೊಳ್ಳಿಯಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕೋಟ ಮಣೂರು ಸಮೀಪ ಮುಂಬೈಯಿಂದ ಮಂಗಳೂರು ಹೋಗುತ್ತಿದ್ದ ಸರ್ಕಾರಿ ವೋಲ್ವೋ ಬಸ್ ಹಿಂದಿನಿಂದ ಬಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಕಾರಿಗೆ ಗುದ್ದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ ಗೊಂಡಿದೆ.ಗಂಭೀರ ಗಾಯಗೊಂಡ ಗೌತಮ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!