ಕೋಟ- ಪಡುಕರೆ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ದತೆ ಕಾರ್ಯಾಗಾರ
Views: 36
ಕನ್ನಡ ಕರಾವಳಿ ಸುದ್ದಿ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸೂಕ್ತ ಮಾರ್ಗದರ್ಶನದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಅವರಿಗೆ ಉಜ್ವಲ ಭವಿಷ್ಯ ನೀಡುವ ಜವಾಬ್ದಾರಿ ಎಲ್ಲಾ ಶಿಕ್ಷಣ ಸಂಸ್ದೆಗಳಿಗೆ ಇದೆ ಎಂದು ಕುಂದಾಪುರ ಸ್ಪರ್ಧಾ ಸಾರಥಿ ಸಂಸ್ಥೆಯ ಸಂಸ್ಥಾಪಕರಾದ ಆದರ್ಶ ಕೆಲ ಹೇಳಿದರು.
ಅವರು ಕೋಟ- ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮತ್ತು ಸ್ಥಾನೀಕರಣ ಘಟಕದ ಸಹಬಾಗಿತ್ವದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಸಾಂಕೇತಿಕವಾಗಿ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜೇಂದ್ರ ಎಸ್. ನಾಯಕ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು, ನಿರಂತರ ಪ್ರಯತ್ನದಿಂದ ಉನ್ನತ ಸರ್ಕಾರಿ ಹುದ್ಧೆಗಳಿಗೆ ನೇಮಕಗೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿಗಳು ಪ್ರೊ. ರಮೇಶ ಆಚಾರ್ ಉಪಸ್ಥಿತರಿದ್ದರು.ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಚಾಲಕರಾದ ಪ್ರೊ. ಸುಬ್ರಹ್ಮಣ್ಯ ಅವರು ಕಾರ್ಯಕ್ರಮ ಸಂಘಟಿಸಿದರು.






