ಶಿಕ್ಷಣ

ಕೋಟ-ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: “ಪ್ರತಿಭಾನ್ವೇಷಣೆ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ

Views: 14

ಕನ್ನಡ ಕರಾವಳಿ ಸುದ್ದಿ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಡುಕರೆಯಲ್ಲಿ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾನ್ವೇಷಣೆಯನ್ನು ಅಕ್ಟೋಬರ್ 16 ರಂದು  ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಟ್ಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಾರದಾ ಹೊಳ್ಳ ಉದ್ಘಾಟಕರಾಗಿ ಭಾಗವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಮೇಶ್ ಹೆಚ್ ಕುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪೋಷಕರ ಪ್ರತಿನಿಧಿಯಾಗಿ ಶ್ರೀನಿವಾಸ್ ಶೆಟ್ಟಿಗಾರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರಮೇಶ್ ಆಚಾರ್, ಐಕ್ಯೂ ಎಸಿ ಸಂಚಾಲಕರಾದ ಶ್ರೀ ಸಂತೋಷ್ ನಾಯ್ಕ್, ವಿದ್ಯಾರ್ಥಿ ಪ್ರತಿನಿಧಿಗಳಾದ ಶಮಿತಾ ತ್ರತೀಯ ಬಿ ಸಿ ಎ, ತ್ರಿಷಾ ತ್ರತೀಯ ಬಿ ಸಿ ಎ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಸಂಘದ ಸಂಚಾಲಕರಾದ ಡಾ.ಶಂಕರ ನಾಯ್ಕ್ ಬಿ ಸ್ವಾಗತಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿ ಸಂಜನಾ ಉದ್ಘಾಟಕರನ್ನು ಪರಿಚಯಿಸಿದರು. ತ್ರತೀಯ ಬಿಕಾಂ ಸ್ನೇಹ ವಂದಿಸಿದರು. ದ್ವಿತೀಯ ಬಿಕಾಂ ಮಿಶ್ರಿಯಾ ಕಾರ್ಯಕ್ರಮ ನಿರ್ವಹಿಸಿದರು. ನಂತರ ಅಂತರ ತರಗತಿ ಸಾಂಸ್ಕೃತಿಕ ಸ್ಪರ್ಧೆಯನ್ನು ನಡೆಸಲಾಯಿತು.

ತೀರ್ಪುಗಾರರಾಗಿ ಕಾಪು ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಸತೀಶ್ ಕೆ, ಮಣೂರು ಪಡುಕರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಾಗರತ್ನ ಗುಂಡ್ಮಿ ಹಾಗೂ ಸಾಸ್ತಾನ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವನಿತಾ ಶೆಟ್ಟಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Back to top button
error: Content is protected !!