ಶಿಕ್ಷಣ

ಕೋಟ ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಡಾ.ಸುಬ್ರಹ್ಮಣ್ಯರಿಗೆ ಬೀಳ್ಕೊಡುಗೆ ಸಮಾರಂಭ 

Views: 14

ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯಲ್ಲಿ ಸುಮಾರು 4 ವರ್ಷ ಕರ್ತವ್ಯ ನಿರ್ವಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಕುಂದಾಪುರ ಇಲ್ಲಿಗೆ ವರ್ಗಾವಣೆಗೊಂಡಿರುವ ಡಾ. ಸುಬ್ರಹ್ಮಣ್ಯ.ಎ ಇವರಿಗೆ ಬೀಳ್ಕೊಡುಗೆ ಸಮಾರಂಭ ಅ.7ರಂದು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಮೇಶ್ ಆಚಾರ್ ಹಾಗೂ ಸಿಬ್ಬಂದಿ ಕಾರ್ಯದರ್ಶಿ ಡಾ.ಶಂಕರ ನಾಯ್ಕ್. ಬಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. .

ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಸಂತೋಷ್ ನಾಯ್ಕ್ ಎಚ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Back to top button
error: Content is protected !!