ಕರಾವಳಿ

ಕೋಟ: ಮಣೂರಿನಲ್ಲಿ ನಕಲಿ ಐಟಿ ಅಧಿಕಾರಿಗಳಂತೆ ದರೋಡೆಗೆ ಬಂದಿದ್ದ ತಂಡ; ಇಬ್ಬರು ವಶಕ್ಕೆ 

Views: 292

ಉಡುಪಿ : ಕೋಟ ಮಣೂರಿನ   ಮನೆಯೊಂದರಲ್ಲಿ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಸಂಚು ರೂಪಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಮುಂಬೈ ನಿವಾಸಿ ಸಂತೋಷ್ ನಾಯಕ್(45) ಹಾಗೂ ಕಾಪು ಪೊಲಿಪು ಮೂಲದ ದೇವರಾಜ್ ಸುಂದರ್ ಮೆಂಡನ್(46) ಬಂಧಿತ ಆರೋಪಿಗಳು.

ಇವರನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಿ, ಉಳಿದ ಆರೋಪಿತಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ಮಾಡುವ ಸಂಚು ರೂಪಿಸಿ ಮಹಾರಾಷ್ಟ್ರದಿಂದ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಜಿಲ್ಲೆಯ ಸ್ಥಳೀಯ ಆರೋಪಿಗಳು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

 

 

Related Articles

Back to top button