ಶಿಕ್ಷಣ
ಕೋಟ ವಿವೇಕ ಪದವಿಪೂರ್ವ ಕಾಲೇಜು :ಸಮಾಜ ಸೇವಾ ಸಂಘ ಉದ್ಘಾಟನೆ

Views: 71
ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರ ಗಿತು.
ಕಾರ್ಯಕ್ರಮದ ಉದ್ಘಾಟಕರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮುರಳಿ ಕಡೆಕಾರ್, ಇವರು ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ನಾವು ಸಮಾಜ ಜೀವಿಗಳು ಸಮಾಜವನ್ನು ಬಿಟ್ಟು ಏಕಾಂಗಿಯಾಗಿ ಬದುಕಲಾರೆವು ಸಮಾಜದ ಕುರಿತಾಗಿ ನಮ್ಮ ಋಣ ಇದ್ದೆ ಇರುತ್ತದೆ ಆದ್ದರಿಂದ ಸಮಾಜದ ನಾಗರೀಕರಾಗಿ ಸಮಾಜ ಸೇವೆಯನ್ನು ಮಾಡುವುದರ ಮೂಲಕ ಸಮಾಜದ ಋಣವನ್ನು ತೀರಿಸಬೇಕು ಅದು ಇಂತಹ ಸೇವಾ ಸಂಘದಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ ನಾವಡರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಂಘದ ಸಂಚಾಲಕ ಶ್ರೀ ಅಶೋಕ್ ಕುಮಾರ್ ಶೆಟ್ಟಿ ವಂದಿಸಿದರು.ವಿದ್ಯಾರ್ಥಿನಿ ಕುಮಾರಿ ಸಾತ್ವಿಕಾ ಕಾರ್ಯಕ್ರಮ ನಿರೂಪಿಸಿದರು.