ಶಿಕ್ಷಣ

ಕೋಟ ವಿವೇಕ ವಿದ್ಯಾ ಸಂಸ್ಥೆಗಳು: ವಾರ್ಷಿಕ ಕ್ರೀಡಾ ದಿನಾಚರಣೆ

Views: 41

ಉಡುಪಿ:ವಿವೇಕ ವಿದ್ಯಾ ಸಂಸ್ಥೆಗಳು, ಕೋಟ ಇದರ ವಾರ್ಷಿಕ ಕ್ರೀಡಾ ದಿನಾಚರಣೆ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ ಶೆಟ್ಟಿಯವರು ಕ್ರೀಡೋತ್ಸವವನ್ನು ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರೋ. ಕೆ. ಉಮೇಶ ಶೆಟ್ಟಿಯವರು ಕ್ರೀಡೆಯು ನಮ್ಮ ಮನಸ್ಸನ್ನು ಹಗುರಗೊಳಿಸುತ್ತದೆ ಮತ್ತು ಜೀವನದಲ್ಲಿ ಸವಾಲುಗಳನ್ನು ಎದುರಿಸಲು ತರಬೇತಿ ನೀಡುತ್ತದೆ. ವಿದ್ಯಾರ್ಥಿಗಳು ಕಾಲೇಜಿನ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಓದುವಿನ ಜೊತೆ ಪಾಠ್ಯೇತರ ಜಟುವಟಿಕೆಗಳಲ್ಲಿ ಕೂಡ ತೊಡಗಿಕೊಳ್ಳಬೇಕೆಂದು ಹೇಳಿದರು. ಹಾಗೇ ವಿವೇಕದಲ್ಲಿ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಕೋಟ ವಿದ್ಯಾಸಂಘದ ಕಾರ್ಯದರ್ಶಿಗಳಾದ ಶ್ರೀ ಎಂ. ರಾಮದೇವ ಐತಾಳರು ಉಪಸ್ಥಿತರಿದ್ದು ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಕ್ರೀಡಾಂಗಣದ ದುರಸ್ತಿ ಕಾರ್ಯದಲ್ಲಿ ಸಹಕರಿಸಿದ ಶ್ರೀ ಸುಬ್ರಾಯ ಆಚಾರ್ ಇವರನ್ನು ಸನ್ಮಾನಿಸಲಾಯಿತು.

ಹಾಗೆಯೇ ಇತ್ತೀಚೆಗೆ ಬಿಜಾಪುರದ ತಾಳಿಕೊಟೆಯಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿ ಶೋಭಿತ್‌ನನ್ನು ಪುರಸ್ಕರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಶ್ರೀ ಕೆ.ಜಗದೀಶ ನಾವಡರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀ ಕೆ. ಜಗದೀಶ ಹೊಳ್ಳ ಧನ್ಯವಾದ ಸಮರ್ಪಣೆಗೈದರು.

ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ವಸಂತ ಶೆಟ್ಟಿ, ಹಿರಿಯ ಸಹಶಿಕ್ಷಕ ಶ್ರೀ ವೆಂಕಟೇಶ ಉಡುಪ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರೀತಿರೇಖಾ ಉಪಸ್ಥಿತರಿದ್ದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಮಮತಾ, ಶ್ರೀ ಗಣೇಶ ಶೆಟ್ಟಿ, ಶ್ರೀ ವಿಶ್ವನಾಥ ನಾಯಕ್, ಶ್ರೀ ರಕ್ಷತ್ ಕ್ರೀಡಾಕೂಟದ ನಿರ್ವಹಣೆಯನ್ನು ನಿರ್ವಹಿಸಿದ್ದರು.

ಶ್ರೀ ನರೇಂದ್ರ ಕುಮಾರ್, ಶ್ರೀಮತಿ. ರತಿ, ಶ್ರೀ ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಶ್ರೀ ಚಂದ್ರಶೇಖರ್ ಎಚ್.ಎಸ್. ಕಾರ್ಯಕ್ರಮ ನಿರ್ವಹಿಸಿದ್ದರು.

Related Articles

Back to top button