ಕೋಟ ಸರಕಾರಿ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ

Views: 144
ಕೋಟ:ಶಿಕ್ಷಣ ಮತ್ತು ಉದ್ಯೋಗ ಅವಕಾಶಗಳ ನಡುವಿನ ಅಂತರವನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕಾದರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿ ಅವರಿಗೆ ಉದ್ಯೋಗಾವಕಾಶವನ್ನು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕೆರೆ ಮತ್ತು ಗೀತಾನಂದ ಫೌಂಡೇಶನ್ ಮಣೂರು ಇವರಿಂದ ಜೂನ್ 14ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಯಿತು.
ಈ ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದವು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಆನಂದ್ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿ ಉದ್ಯೋಗ ಪಡೆಯುವಂತೆ ಮಾಡಿದಾಗ ವಿದ್ಯಾವಂತ ಯುವಕರಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನಿತಾ ವಿ ಅಧ್ಯಕ್ಷತೆ ವಹಿಸಿದರು.ಅವರು ಮಾತನಾಡಿ, ಉದ್ಯೋಗ ಆಕಾಂಕ್ಷಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಕರೆ ನೀಡಿದರು.
ಜ್ಞಾನಭಾರತಿ ಅಕಾಡೆಮಿ ಕುಂದಾಪುರ ಇದರ ನಿರ್ದೇಶಕ ಶ್ರೀ ಸತ್ಯನಾರಾಯಣ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಬೈಂದೂರು ತರಬೇತಿ ಕೇಂದ್ರದ ಸಂಚಾಲಕರಾದ ಸಿ.ಭಾಸ್ಕರ್ ಬಿಲ್ಲವ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶಂಕರ್ ನಾಯಕ್.ಬಿ ಮತ್ತು ಉದ್ಯೋಗ ಮಾಹಿತಿ ಕೋಶಾಧಿಕಾರಿ ಡಾ. ಸುಬ್ರಹ್ಮಣ್ಯ .ಎ ಉಪಸ್ಥಿತರಿದ್ದರು.
ಉದ್ಯೋಗ ಮೇಳದಲ್ಲಿ 704 ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡರು. ಅದರಲ್ಲಿ ಬೇರೆ ಬೇರೆ ಕಂಪನಿಗಳಿಗೆ 262 ಉದ್ಯೋಗ ಆಕಾಂಕ್ಷಿಗಳು ಆಯ್ಕೆಯಾದರು.
ಡಾ. ಸುಬ್ರಹ್ಮಣ್ಯ.ಎ ಸ್ವಾಗತಿಸಿದರು. ಡಾ. ಶಂಕರ್ ನಾಯ್ಕ ವಂದಿಸಿದರು. ರಾಜಣ್ಣ.ಎಂ ಕಾರ್ಯಕ್ರಮ ನಿರೂಪಿಸಿದರು.