ಇತರೆ
ಕೋಡಿ ಬೇಂಗ್ರೆ ದೋಣಿ ದುರಂತ: ಮತ್ತೋರ್ವ ಯುವತಿ ಸಾವು, ಮೃತರ ಸಂಖ್ಯೆ ಮೂರಕ್ಕೆ ಏರಿಕೆ
Views: 59
ಕನ್ನಡ ಕರಾವಳಿ ಸುದ್ದಿ : ಕೋಡಿ ಕನ್ಯಾನದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಈ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ.
ಮೃತರನ್ನು ಮೈಸೂರಿನ ಉದಯಗಿರಿ ಸಮೀಪದ ಜಲಪುರಿ ನಿವಾಸಿ ಶಿವಣ್ಣ ಎಂಬವರ ಮಗಳು ದೀಶಾ(23) ಎಂದು ಗುರುತಿಸಲಾಗಿದೆ.
ಈ ದುರಂತದಲ್ಲಿ ಸೋಮವಾರ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ(27) ಹಾಗೂ ಚಾಮರಾಜನಗರದ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು(25) ಮೃತಪಟ್ಟಿದ್ದರು. ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ(27) ಇದೀಗ ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇವರೆಲ್ಲ ಮೈಸೂರು ಗೋಲ್ ಕ್ರಿಸ್ಟ್ ಇಂಡಿಯಾ ಪ್ರೈವೇಟ್ ಲಿ. ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದಾರೆ.






