ಇತರೆ

ಕ್ಯಾಂಟಿನ್ ನಲ್ಲಿ ವೇಶ್ಯಾವಾಟಿಕೆ ದಂದೆ; ಮೂವರ ಬಂಧನ

Views: 58

ಕನ್ನಡ ಕರಾವಳಿ ಸುದ್ದಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ಕ್ಯಾಂಟಿನ್ ಒಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ದಾಳಿಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಲಾಗಿದೆ.

ಕೆಇಬಿ ರಸ್ತೆಯ ಬಳಿಯಿರುವ ‘ಪವನ್’ ಹೆಸರಿನ ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಶನಿವಾರ ಸಂಜೆ ಹಠಾತ್ ದಾಳಿ ನಡೆಸಿದ್ದಾರೆ.

ದಂಧೆಯ ರೂವಾರಿ ಎನ್ನಲಾದ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಹಾಗೂ ಆತನಿಗೆ ಸಹಕರಿಸುತ್ತಿದ್ದ ಉಸ್ಮಾನ್ ಮತ್ತು ಹೈದರ್ ಎಂಬುವವರನ್ನು ಪೊಲೀಸರು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.

ದಾಳಿಯ ಸಂದರ್ಭದಲ್ಲಿ ಸುಮಾರು 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ದಂಧೆಗೆ ಬಳಸುತ್ತಿದ್ದ 5,000 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಸ್ತುತ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related Articles

Back to top button
error: Content is protected !!