ಕ್ರೂರವಾಗಿ ಯುವತಿಯ ಕೊಲೆ ಮಾಡಿ ಪೊದೆಯಲ್ಲಿ ಬಿಸಾಡಿರುವ ಹಂತಕರು!!

Views: 291
ಯುವತಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪೊದೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದ್ದು, ಅತ್ಯಂತ ಹೇಯ ಕೃತ್ಯ ಬೆಚ್ಚಿ ಬೀಳಿಸಿದೆ. ಯುವತಿಯ ಸಾವಿಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಯುವತಿಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಆಕೆಯನ್ನು ಕೊಂದಿರುವ ಹಂತಕ ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿ ಮೃತದೇಹವನ್ನುಎಸೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ (20) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರಿಗೆ ಕರೆ ಬಂದಿತ್ತು.
ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಅಧಿಕಾರಿಗಳು ಯುವತಿ ದೇಹದ ಮೇಲೆ ಅನೇಕ ಗಾಯದ ಗುರುತುಗಳನ್ನು ಪತ್ತೆ ಮಾಡಿದ್ದಾರೆ. ಯುವತಿಯನ್ನು ಅತ್ಯಂತ ಕ್ರೂರವಾಗಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವತಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.






