ಇತರೆ

ಕ್ರೂಸರ್- ಲಾರಿ ಮಧ್ಯೆ ಭೀಕರ ಅಪಘಾತ :ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು 

Views: 43

ಕನ್ನಡ ಕರಾವಳಿ ಸುದ್ದಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ  ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.

ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು.ಎಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಎಲ್ಲರೂ ಒಂದೇ ಕ್ರೂಸರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ಕ್ರೂಸರ್ ವಾಹನ ಡಿಕ್ಕಿ ಪರಿಣಾಮ ಎಲ್ಲರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ

ಕುಟುಂಬದ ಸದಸ್ಯರ ಅಕಾಲಿಕ ಮರಣದಿಂದ ಅವರ ಬಂಧು-ಬಳಗ, ಸ್ನೇಹಿತರು, ಊರಿನ ಜನರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಜನರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಸ್ಪತ್ರೆ ಮತ್ತು ಗ್ರಾಮದ ಕಡೆಗೆ ದಾವಿಸುತ್ತಿದ್ದಾರೆ

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related Articles

Back to top button
error: Content is protected !!