ಶಿಕ್ಷಣ

ಖಾಸಗಿ ಬಸ್ – ಬೈಕ್ ನಡುವೆ ಅಪಘಾತ:ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

Views: 35

ಕನ್ನಡ ಕರಾವಳಿ ಸುದ್ದಿ: ಪುತ್ತಿಗೆ ಗ್ರಾಮದ ಹಂಡೇಲುಸುತ್ತು ಬಳಿ ಸಂಭವಿಸಿದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಮೈಸೂರು ಮೂಲದ ಸಮೃದ್ ಮೃತರು.

ಸಮೃದ್ಧ ಅವರು ತಮ್ಮ ಸಹಪಾಠಿ ಬೆಳ್ತಂಗಡಿ ಮೂಲದ ನಿಶಾಂತ್ ಅವರೊಂದಿಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟದಿಂದ ಮರಳಿ ಮಿಜಾರ್‌ನಲ್ಲಿರುವ ತಮ್ಮ ಹಾಸ್ಟೆಲಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ವಿದ್ಯಾಗಿರಿ ಸಮೀಪದ ಹಂಡೇಲುಸುತ್ತಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಮೃದ್ಧ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ನಿಶಾಂತ್ ಅವರ ಭುಜಕ್ಕೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!