ಕರಾವಳಿ
ಗಂಗೊಳ್ಳಿ: ನಾಪತ್ತೆಯಾಗಿದ್ದ ಮೀನುಗಾರನ ಶವ ಪತ್ತೆ

Views: 56
ಗಂಗೊಳ್ಳಿ: ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.
ಕಿರಿಮಂಜೇಶ್ವರ ಗ್ರಾಮದ ಮಾಚ ಖಾರ್ವಿ (49) ಮೃತರು.
ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ ಬಂದರ್ ನಿಂದ 12 ನ್ಯಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದು ಕಾಣೆಯಾಗಿ ಜನವರಿ 7ರಂದು ಮದ್ಯಾಹ್ನ 2 ಗಂಟೆಗೆ ಮೃತ ದೇಹ ಪತ್ತೆಯಾಗಿದೆ.
ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.






