ಸಾಮಾಜಿಕ
ಗಂಡನ ಕೊಡಲಿ ಏಟಿನ ನಂತರ ಹೆಂಡತಿಗೆ ಸ್ಕ್ರೂಡ್ರೈವರ್ನಿಂದ ಕುತ್ತಿಗೆಗೆ ಚುಚ್ಚಿ ಕೊಲೆ

Views: 128
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತೇಜಸ್ವಿನಿ ಕೊಲೆಯಾದ ಮಹಿಳೆ. ಜಯರಾಮು ಕೊಲೆಗೈದ ದುರ್ದೈವಿ.
ಕೌಟುಂಬಿಕ ವಿಚಾರವಾಗಿ ದಂಪತಿಗಳ ನಡುವೆ ಜಗಳ ಶುರುವಾಗಿದೆ. ಬಳಿಕ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ.ತಲೆಗೆ ಕೊಡಲಿಯಿಂದ ಹಲ್ಲೆ ಮಾಡಿ ಸ್ಕ್ರೂಡ್ರೈವರ್ನಿಂದ ಚುಚ್ಚಿತೀವ್ರ ರಕ್ತಸ್ರಾವದಿಂದ ತೇಜಸ್ವಿನಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.






