ಕ್ರೀಡೆ

ಗಂಡನ ನಿರಂತರ ಕಿರುಕುಳ ತಾಳಲಾರದೆ ಪ್ರಾಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Views: 144

ಕನ್ನಡ ಕರಾವಳಿ ಸುದ್ದಿ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗುರದಲ್ಲಿ ನಡೆದಿದೆ.

ಕಿರಣ್‌ ಸೂರಜ್ ದಾಧೆ (29) ಆತ್ಮಹತ್ಯೆಗೆ ಶರಣಾದ ಕಬಡ್ಡಿ ಆಟಗಾರ್ತಿ

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ರಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕುಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕುಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Related Articles

Back to top button
error: Content is protected !!