ಇತರೆ
ಗಂಡ ಹೆಂಡತಿ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಕೊಂದು ಆತ್ಮಹತ್ಯೆಗೈದ ಪತಿ
Views: 95
ಕನ್ನಡ ಕರಾವಳಿ ಸುದ್ದಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ನವೀನ್ ಕುಮಾರ್ ಹಾಗೂ ವತ್ಸಲ ಮೃತ ದಂಪತಿ. ಕಳೆದ 8 ವರ್ಷದ ಹಿಂದೆ ಮದುವೆಯಾಗಿದ್ದರು. ಸಣ್ಣ ಪುಟ್ಟ ವಿಚಾರಕ್ಕೆ ಜಗಳವಾಡ್ತಿದ್ದ ದಂಪತಿ ಕಳೆದ ವಾರ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು.ಇತ್ತ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿ ವತ್ಸಲಳ ಕತ್ತು ಹಿಸುಕಿ ಪತಿ ನವೀನ್ ಕುಮಾರ್ ಕೂಡ ಆತ್ಮತ್ಯೆಗೆ ಶರಣಾಗಿದ್ದಾನೆ.
ಈ ದಂಪತಿಗೆ 7 ವರ್ಷದ ಒಂದು ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗುತ್ತಿತ್ತು. ಅಂತೆಯೇ ಕಳೆದ ವಾರವೂ ಗಲಾಟೆ ಮಾಡಿಕೊಂಡು ಠಾಣೆ ಮೆಟ್ಟಿಲೇರಿದ್ದರು. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






