ಇತರೆ

ಗಡಿ ಕಾಯುತ್ತಿದ್ದ ಯೋಧನೊಬ್ಬ ಈ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ

Views: 137

ಕನ್ನಡ ಕರಾವಳಿ ಸುದ್ದಿ:ಕಾಶ್ಮೀರ ಆಗ್ರಾ ಚೀನಾ ಗಡಿ ಕಾಯುತ್ತಿದ್ದ ಯೋಧನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜಾಪುರದ ನಿವಾಸಿ, 35 ವರ್ಷದ ಎಂ.ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಯೋಧ. ಚಂದ್ರಶೇಖ‌ರ್ ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ ಪರದಾಡುತ್ತಿದ್ದರು ಎಂದು ತಿಳಿದು ಬಂದಿದೆ.

ತಿಂಗಳ ಹಿಂದೆ ರಜೆ ಮೇಲೆ ಮನೆಗೆ ಬಂದಿದ್ದ ಚಂದ್ರಶೇಖ‌ರ್ ದೀಪಾವಳಿ ಹಬ್ಬದ ನಂತರ ಕರ್ತವ್ಯಕ್ಕೆ ವಾಪಸ್ಸಾಗಬೇಕಿತ್ತು. ಆದ್ರೆ, ಸಾವಿನ ದಾರಿ ಹಿಡಿದಿದ್ದಾರೆ. ಈ ಬಗ್ಗೆ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!