ಇತರೆ
ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ದುರಂತ: ಮೂವರು ಯುವಕರು ಸಾವು
Views: 14
ಕನ್ನಡ ಕರಾವಳಿ ಸುದ್ದಿ, ಸವದತ್ತಿ: ಬೆಳಗಾವಿಯ ಚಾವ್ಹಾಟ ಗಲ್ಲಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದೆ.
ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.
ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ (22), ಆಕಾಶ್ ಜಾಧವ್ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






