ಇತರೆ

ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಿಸಲು ಬಂದ ವ್ಯಕ್ತಿಯ ಮೇಲೆ ವಿದ್ಯುತ್ ಲೈಟ್ ಕಂಬ ಬಿದ್ದು ಸಾವು 

Views: 4

ಕನ್ನಡ ಕರಾವಳಿ ಸುದ್ದಿ:ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಏಕಾಏಕಿ ವಿದ್ಯುತ್ ಲೈಟ್ ಕಂಬವೊಂದು ಕುಸಿದು ನೇಪಾಳ ಮೂಲದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಾರತ್‌ಹಳ್ಳಿ ಸಮೀಪದ ಸಂಜಯನಗರದಲ್ಲಿ ನಡೆದಿದೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಂಜಯನಗರದಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಯೊಂದಿಗೆ ಆರ್ಕೆಸ್ಟ್ರಾ ಕಾರ್ಯಕ್ರಮವೂ ಆಯೋಜಿಸಲಾಗಿತ್ತು. ಇದನ್ನು ವೀಕ್ಷಿಸಲು ರಾತ್ರಿ ಸುಮಾರು 11 ಗಂಟೆ ವೇಳೆಗೆ ಹಲವರು ರಸ್ತೆ ಬದಿಯಲ್ಲಿ ನಿಂತಿದ್ದರು. ಇದೇ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಹಳೆಯ ವಿದ್ಯುತ್ ಲೈಟ್ ಕಂಬ ಏಕಾಏಕಿ ನೆಲಕ್ಕುರುಳಿದೆ.

Related Articles

Back to top button
error: Content is protected !!