ಯುವಜನ

ಗಣೇಶ ವಿಸರ್ಜನೆ ವೇಳೆ ಬಾಲಕ ನೀರಿನಲ್ಲಿ ಮುಳುಗಿ ಸಾವು

Views: 47

ಕನ್ನಡ ಕರಾವಳಿ ಸುದ್ದಿ: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಹೊಳೆಹೊನ್ನೂರು ಕುರುಬರ ವಿಠಲಾಪುರದಲ್ಲಿ ನಡೆದಿದೆ.

ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಈ ಅವಘಡ ನಡೆದಿದೆ.

ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದರು. ನಾಲೆಯಲ್ಲಿ ಗಣಪತಿ ವಿಸರ್ಜಿಸುವಾಗ ಆಯತಪ್ಪಿದ ಬಾಲಕ ಕುಶಾಲ್ ನಾಲೆಗೆ ಬಿದ್ದಿದ್ದಾನೆ ಎನ್ನಲಾಗುತ್ತಿದೆ.

ಸ್ಥಳೀಯರು ನಾಲೆಯಲ್ಲಿ ಹುಡುಕಾಡಿ ಶವ ಹೊರ ತೆಗೆದಿದ್ದಾರೆ‌.ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button