ಕೃಷಿ
ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಬಿದ್ದು ರೈತ ಸಾವು

Views: 0
ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಅವಗಡ ಸಂಭವಿಸಿದ್ದು , ರೈತನೋರ್ವ ಭತ್ತದ ನಾಟಿ ಮಾಡುತ್ತಿರುವ ವೇಳೆ ಟ್ರ್ಯಾಕ್ಟರ್ ಮಗುಚಿ ಮೈ ಮೇಲೆ ಬಿದ್ದು ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ರೈತ ಪಾಂಡುರಂಗ ಸದೊಬ್ಬ ಲಾಡ ಗಾಂವ್ಕರ್ (68) ಎಂದು ತಿಳಿಯಲಾಗಿದೆ.
ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ಶಾಸಕರಾದ ಅರವಿಂದ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.






