ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

Views: 152
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರತಿಯೊಬ್ಬ ಮನುಷ್ಯನ ಬದುಕಿನಲ್ಲಿ ಶಿಕ್ಷಕನ ಪಾತ್ರ ಮಹತ್ವದ್ದು. ಸಂಸ್ಕೃತಿಯ ನಿರ್ಮಾತೃರಾಗಿ, ನಮ್ಮೊಳಗಿನ ಅಂಧಕಾರವನ್ನು ಕಳೆದು ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಾಳುವುದಕ್ಕೆ ಕಾರಣಿಭೂತರಾದವರು. ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವುದು ಅವರ ವ್ಯಕ್ತಿತ್ವಕ್ಕೆ ಸಂದ ಗೌರವಾಗಿದೆ ಎಂದರು.
ಪ್ರಾಂಶುಪಾಲರಾದ ಡಾ. ರೂಪಾ ಶಣೈಯವರು ಮಾತಾಡಿ ಶಿಕ್ಷಕ ವೃತ್ತಿ ಸರ್ವರೂ ಆದರಿಸಿ ಗೌರವಿಸುವ ವೃತ್ತಿಯಾಗಿದೆ. ಶಿಕ್ಷಕ ನಿಸ್ವಾರ್ಥಿಯಾಗಿ, ಕಾರ್ಯದಕ್ಷತೆಯೊಂದಿಗೆ ತನ್ನ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು ಎಂದರು.
ವಿದ್ಯಾರ್ಥಿಗಳು ಶಿಕ್ಷಕ ವೃಂದದವರನ್ನು ಗೌರವಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕುಮಾರಿ ಶಿಲ್ಪ ಕಾರ್ಯಕ್ರಮ ನಿರೂಪಿಸಿದರೆ, ಕುಮಾರಿ ಪ್ರಜನ್ಯ ಸ್ವಾಗತಿಸಿ, ಕುಮಾರಿ ಕೃತಿ ಶ್ರೀ ವಂದಿಸಿದರು.