ಗುರುಕುಲ ಪದವಿ ಪೂರ್ವ ಕಾಲೇಜು: ಅಂತರ್ ತರಗತಿ ಕ್ರೀಡಾಕೂಟ
Views: 221
ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ್ ತರಗತಿ ಕ್ರೀಡಾಕೂಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಜೊತೆ ಜೊತೆಗೆ ಕ್ರೀಡಾ ಚಟುವಟಿಕೆಗಳ ಮಹತ್ವ ತಿಳಿಸುವ ಈ ಕಾರ್ಯಕ್ರಮವನ್ನು ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸುಭಾಶ್ಚಂದ್ರ ಶೆಟ್ಟಿಯವರು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿ ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರು ಮಾತನಾಡುತ್ತಾ, ತರಗತಿಯ ಒಳಗೆ ಮತ್ತು ಹೊರಗೆ ನಾವು ಕಲಿಯಬೇಕಾದದ್ದು ಬಹಳಷ್ಟು ಇರುವುದರಿಂದ ಕ್ರೀಡೆಯನ್ನು ಸ್ಪರ್ಧಾತ್ಮಕ ದೃಷ್ಟಿಕೋನದಿಂದ ನೋಡಬೇಕಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸೋಲೇ ಗೆಲುವಿನ ಮೆಟ್ಟಿಲಾಗಿ ಆಂತರಿಕ ಶಿಸ್ತು ಸಂಯಮಗಳಿಗೆ ಇದು ಕಾರಣವಾಗಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸುಭಾಶ್ಚಂದ್ರ ಶೆಟ್ಟಿ ಅವರು ಮಾತನಾಡುತ್ತಾ, ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಕ್ರೀಡೆ ಅತಿ ಅಗತ್ಯ. ಕ್ರೀಡೆ ಉತ್ತಮ ಸಂಸ್ಕಾರವನ್ನು ಹುಟ್ಟುಹಾಕುವುದಲ್ಲದೆ ಉತ್ತಮ ಸ್ಥಾನಮಾನಗಳನ್ನು ದೊರಕಿಸಿಕೊಡುತ್ತದೆ ಎಂದರು. ಪ್ರಾಂಶುಪಾಲರಾದ ಡಾ. ರೂಪಾ ಶಣೈ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಶುಭ ಕೋರಿದರು. ವಿದ್ಯಾರ್ಥಿನಿ ಪ್ರಜನ್ಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.






