ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ 

Views: 253

ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯ ನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ – ಪ್ರಕೃತಿ ಇದ್ದರೆ ಮಾತ್ರ – “ನಾವು ಮತ್ತು ನಮ್ಮ ಬದುಕು.’’ ಪ್ರಕೃತಿಯನ್ನು ಪೋಷಿಸೋಣ – ಹಸಿರು ಭವಿಷ್ಯವನ್ನು ನಿರ್ಮಿಸೋಣ ‘ ಎಂಬ ಸಂದೇಶವು ನಮ್ಮ ಜೀವನದ ಮೂಲ ಮಂತ್ರವಾಗಬೇಕು. ಪರಿಸರ ಸಂರಕ್ಷಣೆಯು ಮನುಕುಲದ ದೊಡ್ಡ ಜವಾಬ್ದಾರಿಯಾಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು. ಯುವ ಮನಸ್ಸು ಗಿಡ ಮರಗಳನ್ನು ಬೆಳೆಸಿ ಪೋಷಿಸುವತ್ತ ನಮ್ಮ ಚಿತ್ತ ಹರಿಸಬೇಕು ಎಂದರು.

ಪ್ರಾಂಶುಪಾಲರಾದ ಡಾ.ರೂಪಾ ಶೆಣೈ ಅವರು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಸಂದೇಶ ನೀಡಿದರು. ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಸಹ ಶಿಕ್ಷಕಿ ಶ್ರೀಮತಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Back to top button
error: Content is protected !!