ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ 

Views: 0

ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಬಾಂಡ್ಯಎಜುಕೇಶನಲ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ 2026-27 ನೇ ಸಾಲಿನ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಜೂನ್ 19ರಂದು ಹಮ್ಮಿಕೊಳ್ಳಲಾಗಿತ್ತು.

ಬಾಂಡ್ಯ ಎಜ್ಯುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ – ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯವಾದದು. ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಹೆಚ್ಚು ಹೆಚ್ಚು ಕೌಶಲ್ಯಗಳನ್ನು ರೂಢಿಸಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭೆಯನ್ನು ಗುರುತಿಸಿ ಬೆಳಸಿ, ಸಾಧನೆಯತ್ತ ಮುನ್ನಡೆಯೋಣ ಎಂಬ ಸಂದೇಶದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ, ಚದುರಂಗ, ಕೊಳಲು ವಾದನ, ಸ್ನೇಟಿಂಗ್, ಏರೋಬಿಕ್ಸ್, ಭರತನಾಟ್ಯ, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ಯಕ್ಷಗಾನ ತರಬೇತಿ ಯಂತಹ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕಿ ಶ್ರೀಮತಿ ಸುಲೋಚನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನನ್ನ

Related Articles

Back to top button
error: Content is protected !!