ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪೋಷಕ – ಶಿಕ್ಷಕರ ಸಭೆ

Views: 0

ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪೂರ್ವ ಪ್ರಾಥಮಿಕದಿಂದ ಪ್ರಥಮ ತರಗತಿಯ ವಿದ್ಯಾರ್ಥಿಗಳ ಪೋಷಕ -ಶಿಕ್ಷಕರ ಸಭೆಯನ್ನು ಜೂನ್ 20ರಂದು ಹಮ್ಮಿಕೊಳ್ಳಲಾಗಿತ್ತು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರು ಮಾತನಾಡಿ – ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದು. ಪರಸ್ಪರ ಸಹಕಾರ ಮನೋಭಾವದಿಂದ ಪ್ರತಿ ವಿದ್ಯಾರ್ಥಿಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸಾಧ್ಯ. ಮನೆಯೇ ಮೊದಲ ಪಾಠಶಾಲೆಯಾದ ಕಾರಣ ಮಕ್ಕಳ ಕಲಿಕೆಯ ಪ್ರತಿ ಹೆಜ್ಜೆಯನ್ನು ಸುದೃಢಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಮುಕ್ತವಾಗಿ ಚರ್ಚಿಸಿದಾಗ ವಿದ್ಯಾರ್ಥಿಗಳ ಅಭಿರುಚಿಗೆ ಪೂರಕವಾದ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಇಶ್ನಾ ಪ್ಲೇ ಸ್ಕೂಲ್ ನ ಸಹ ಸ್ಥಾಪಕಿ, ಶಿರಾಂತ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕಿ ಹಾಗೂ ಶಿಕ್ಷಕರ ತರಬೇತುದಾರರಾದ ಶ್ರೀಮತಿ ಶಿಲ್ಪಾ ರಂಜಿತ್ ಶೆಟ್ಟಿ ಅವರು ಮಾತನಾಡಿ – ಮಕ್ಕಳಲ್ಲಿ ಸೃಜನಶೀಲತೆ, ನಾಯಕತ್ವ ಗುಣಗಳು ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯದ್ದಾಗಿದ್ದು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಮುತುವರ್ಜಿ ವಹಿಸಬೇಕು. ಶೈಕ್ಷಣಿಕ ಯೋಜನೆಗಳ ಮಾಹಿತಿ ಪೋಷಕರಿಗೆ ತಿಳಿದಾಗ ಅದರಂತೆ ತಮ್ಮ ಮಕ್ಕಳನ್ನು ಕಲಿಕೆಗೆ ಅಣಿಗೊಳಿಸಲು ಸಹಕಾರಿಯಾಗುತ್ತದೆ ಎಂದರು.

ಪ್ರಾಂಶುಪಾಲರಾದ ಡಾ. ರೂಪಾ ಶೆಣೈಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಅದರ ಮಹತ್ವವನ್ನು ಪೋಷಕರಿಗೆ ತಿಳಿಸಿದರು. “ ಪ್ರತಿ ಮಗುವಿನ ಉಜ್ವಲ ಭವಿಷ್ಯಕ್ಕಾಗಿ ಮನೆ ಮತ್ತು ಶಾಲೆಯ ನಡುವಿನ ಬಾಂಧವ್ಯ “ ಎಂಬ ಧ್ಯೇಯೋದಯೊಂದಿಗೆ ಸಭೆ ಸಂಪನ್ನಗೊಂಡಿತು. ಶ್ರೀಮತಿ ಕೀರ್ತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Back to top button
error: Content is protected !!