ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ : ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

Views: 334

ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಕಿಂಡರ್‌ ಗಾರ್ಟನ್‌ ವಿಭಾಗದಲ್ಲಿ ಮಕ್ಕಳಿಗಾಗಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನಾನಾ ವೇಷಭೂಷಣಗಳಲ್ಲಿ ಮುದ್ದಾದ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಶಿಕ್ಷಕರ ಸಹಕಾರ ಹಾಗೂ ಪೋಷಕರ ಪ್ರೋತ್ಸಾಹದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಪುಟಾಣಿ ಮಕ್ಕಳ ವೈವಿಧ್ಯಮಯ ಕಲಾ ಭಂಗಿಗಳನ್ನು ಫೋಟೋಗ್ರಾಫರ್ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಜಂಟಿ ಕಾರ್ಯಾನಿರ್ವಾಹಕಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಉಪಸ್ಥಿತರಿದ್ದು ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಡಾ ರೂಪಾ ಶೆಣೈ, ಶಿಕ್ಷಕರು, ಪೋಷಕರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ಶ್ರೀಮತಿ ರೇಣುಕಾ ನಿರೂಪಿಸಿ, ವಂದಿಸಿದರು.

Related Articles

Back to top button