ಗುರುಕುಲ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜು: ಶಿಕ್ಷಕ ದಿನಾಚರಣೆ

Views: 65
ಕನ್ನಡ ಕರಾವಳಿ ಸುದ್ದಿ: ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ವತಿಯಿಂದ ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಗುರುಕುಲ ಪಬ್ಲಿಕ್ ಸ್ಕೂಲ್ ಮತ್ತು ಗುರುಕುಲ ಪದವಿ ಪೂರ್ವ ಕಾಲೇಜಿನ ಎಲ್ಲಾ ಶಿಕ್ಷಕ ಬಂಧುಗಳನ್ನು ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಯವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪವಿತ್ರವಾದ ಸ್ಥಾನವಿದೆ, ಶಿಕ್ಷಕ ವಿದ್ಯಾರ್ಥಿಗಳಿಗೆ ಸಮಾನತೆಯ ಸಂದೇಶವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ರೂಪಿಸಬೇಕು ಎಂದರು. ಮಹಾ ತತ್ವಜ್ಞಾನಿ ಡಾ. ರಾಧಾಕೃಷ್ಣನ್ ರವರ ಜೀವನ ದರ್ಶನವು ನಮಗೆಲ್ಲ ಮಾದರಿಯಾಗಬೇಕು ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸುಭಾಶ್ಚಂದ್ರ ಶೆಟ್ಟಿ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿ ಗೌರವಿಸಿದರು, ಪ್ರಾಂಶುಪಾಲರಾದ ಡಾ. ರೂಪಾಶಣೈ ರವರು ಶಿಕ್ಷಕ ದಿನಾಚರಣೆಯ ಉದ್ದೇಶ ಮತ್ತು ಅದರ ಮಹತ್ವವನ್ನು ತಿಳಿಸಿ, ಶಿಕ್ಷಕ ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿಸಲು ಬದ್ಧನಾಗಿರಬೇಕು ಎಂದು ಹೇಳಿದರು, ಶಿಕ್ಷಕಿ ಶ್ರೀಮತಿ ಸಂಪ್ರೀತ ನಾಯಕ್ ಹಾಗೂ ಪ್ರೊ. ಹಯವದನ ಉಪಾಧ್ಯ ಪ್ರತಿ ವಂದನೆಯ ಮಾತುಗಳನ್ನಾಡಿದರು. ಶಿಕ್ಷಕಿ ಶ್ರೀಮತಿ ಸುಮಲತಾ ರವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.