ಗುರುಕುಲ ಪಬ್ಲಿಕ್ ಸ್ಕೂಲ್: ಸಂಕ್ರಾಂತಿ ಹಬ್ಬ ಮತ್ತು ಸಂಸ್ಥಾಪನಾ ದಿನಾಚರಣೆ
Views: 9
ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸ್ಥಾಪನಾ ದಿನಾಚರಣೆ ಹಾಗೂ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್, ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮೀ ಸಂಸ್ಥೆಯು ಗ್ರಾಮೀಣ ಪರಿಸರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಉತ್ತಮ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಿಕೊಂಡು ಬಂದಿದೆ. ದೇಸಿ ಸಂಸ್ಕೃತಿಯನ್ನು ಪೋಷಿಸುವುದರೊಂದಿಗೆ ವರ್ತಮಾನಕ್ಕೆ ಬೇಕಾದ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದನ್ನು ಬದ್ಧತೆಯಿಂದ ಕಾಯ್ದುಕೊಂಡು ಬಂದಿದ್ದೇವೆ. ಬದುಕಿನ ಕಹಿಗಳೆಲ್ಲಾ ಸಹಿಯಾಗಿ ಯಶಸ್ಸು ನಿಮ್ಮಪಾಲಿಗಿರಲಿ ಎಂದು ಸಂಕ್ರಾಂತಿ ಹಬ್ಬಕ್ಕೆ ಶುಭ ಹಾರೈಸಿದರು.
ಪ್ರಾಂಶುಪಾಲರಾದ ಡಾ.ರೂಪ ಶಣೈರವರು ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ತಿಳಿಸಿ ಸರ್ವರಿಗೂ ಶುಭ ಕೋರಿದರು. ಶಿಕ್ಷಕಿ ಸುಲಕ್ಷಣ ರವರು ಸಂಸ್ಥಾಪನಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿ ಅವನಿ ಸಂಕ್ರಾಂತಿ ಹಬ್ಬದ ಕುರಿತು ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ಹಿಮಾಂಷು ಕಾರ್ಯಕ್ರಮವನ್ನು ನಿರೂಪಿಸಿ ಅಂತಿಮವಾಗಿ ವಂದಿಸಿದರು.






