ಶಿಕ್ಷಣ

ಗುರುಕುಲ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Views: 153

ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಶಾಲೆಯಲ್ಲಿ2025 -26 ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ದಿನಾಂಕ 20 ಜೂನ್ 2025 ರಂದು ನೆರವೇರಿತು. 

ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ,ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ಸಹ ಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೇತೃತ್ವ ಹಾಗೂ ಸೃಜನಶೀಲತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಶಾಲಾ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರಾಭಿವೃದ್ಧಿಗಾಗಿ ಪಠ್ಯ ಹಾಗೂ ಸಹ ಪಠ್ಯ ಚಟುವಟಿಕೆಗಳ ಸಮನ್ವಯದ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕೇವಲ ಪಾಠ ಪುಸ್ತಕಗಳಿಗೆ ಮಾತ್ರ ಸೀಮಿತವಾಗದೆ ಕ್ರೀಡೆ, ಸಂಗೀತ, ನಾಟಕ, ಕಲೆ, ವೈಜ್ಞಾನಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಂದ ಸ್ಕೇಟಿಂಗ್ ಹಾಗೂ ಕರಾಟೆ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಎಲ್ಲಾ ಸಹಪಠ್ಯ ಚಟುವಟಿಕೆಯ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹ ಶಿಕ್ಷಕಿ ಐಶ್ವರ್ಯ ನಿರೂಪಿಸಿ, ವಂದಿಸಿದರು.

Related Articles

Back to top button