ಶಿಕ್ಷಣ
ಗುರುಕುಲ ಶಾಲೆಯಲ್ಲಿ ಸಾಂಪ್ರದಾಯಿಕ ದಿನ ಮತ್ತು ಸಾಂಸ್ಕೃತಿಕ ಬಹುಮಾನ ವಿತರಣೆ ಸಮಾರಂಭ
"ಮಕ್ಕಳಿಗೆ ನಮ್ಮ ಸನಾತನ ಧರ್ಮದ ತತ್ವಗಳನ್ನು ತಿಳಿಸುವುದರ ಜೊತೆಗೆ ಎಲ್ಲರೂ ತಮ್ಮಲ್ಲಿ ಅವುಗಳನ್ನು ಅಳವಡಿಸಿ ಕೊಳ್ಳುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ"---ಅನುಪಮಾ.ಎಸ್.ಶೆಟ್ಟಿ

Views: 386
ಕನ್ನಡ ಕರಾವಳಿ ಸುದ್ದಿ: ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ, ಕೋಟೇಶ್ವರದಲ್ಲಿ ಜ.1ರಂದು ಶನಿವಾರ ಸಾಂಪ್ರದಾಯಿಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯ ನಿರ್ವಾಹಕರಾದ ಶ್ರೀಮತಿ.ಅನುಪಮಾ.ಎಸ್.ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ಸನಾತನ ಧರ್ಮದ ತತ್ವಗಳನ್ನು ತಿಳಿಸುವುದರ ಜೊತೆಗೆ ಎಲ್ಲರೂ ತಮ್ಮಲ್ಲಿ ಅವುಗಳನ್ನು ಅಳವಡಿಸಿ ಕೊಳ್ಳುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ , ಉಳಿದ ಮಕ್ಕಳು ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ತಮ್ಮ ಗುರಿ ಸಾಧನೆಯನ್ನು ಸಾಕಾರ ಗೊಳಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ದಿನದ ಪ್ರಯುಕ್ತ ಸಿಹಿ ತಿಂಡಿ ವಿತರಿಸಲಾಯಿತು.ಪೋಷಕರಿಗಾಗಿ ಸಾಂಪ್ರದಾಯಿಕ ವಸ್ತು ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ವಿಶೇಷವಾಗಿ 2024ರ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಪಡೆದ ಹೆಮ್ಮೆಯ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯಳನ್ನು ಗೌರವಪೂರ್ವಕವಾಗಿ ಪೋಷಕರ ಎದುರಿನಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ . ಸುನಿಲ್ ಪ್ಯಾಟ್ರಿಕ್, ಶಿಕ್ಷಕ ವೃಂದ,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಸಹಶಿಕ್ಷಕಿ ಅಶ್ವಿನಿ ನಿರೂಪಿಸಿ, ವಂದಿಸಿದರು.










