ರಾಜಕೀಯ
ಗೃಹಲಕ್ಷ್ಮೀಯರಿಗೆ ಎರಡು ತಿಂಗಳ ಕಂತಿನ ಹಣ ಶೀಘ್ರವೇ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್

Views: 64
ಪ್ರತಿ ತಿಂಗಳು ಮಹಿಳೆಯರ ಅಕೌಂಟ್‌ಗೆ 2000 ರೂಪಾಯಿ ಜಮಾ ಮಾಡುವ ಗೃಹಲಕ್ಷ್ಮೀ ಯೋಜನೆ ಜೂನ್ ತಿಂಗಳ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದಕ್ಕೆ ಟೀಕೆಗೆ ಗುರಿಯಾಗಿತ್ತು, ಗೃಹ ಲಕ್ಷ್ಮೀ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹ ಲಕ್ಷ್ಮೀ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಎರಡು ತಿಂಗಳ ಹಣ ಒಂದೇ ಕಂತಿನಲ್ಲಿ ಪಾವತಿ ಮಾಡದೇ ಇದ್ದರೂ, ಒಂದು ವಾರದ ಅಂತರದಲ್ಲಿ ಎರಡು ಬಾರಿ ಹಣ ಜಮೆಯಾಗುತ್ತದೆ ಎಂದು ಸಚಿವೆ ಭರವಸೆ ನೀಡಿದ್ದು ಮಹಿಳೆಯರ ಖುಷಿ ಹೆಚ್ಚಿಸಿದೆ.ಎರಡು ತಿಂಗಳ ಹಣ ಗೃಹಲಕ್ಷ್ಮೀಯರ ಖಾತೆಗೆ ಬರಲಿದ್ದು, ವಿಪಕ್ಷಗಳ ಟೀಕೆಗಳಿಗೂ ಉತ್ತರ ಕೊಟ್ಟಂತಾಗುತ್ತದೆ.






