ರಾಜಕೀಯ

ಗೋಪಾಡಿ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂತ ಆಯ್ಕೆ

Views: 0

ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 9 ಸ್ಥಾನಗಳಿದ್ದು, ಈ ಪೈಕಿ ಎಲ್ಲರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.

ಎರಡನೆಯ ಅವಧಿಗೆ ಚುನಾವಣೆಯಲ್ಲಿ ಸರಕಾರದ ನಿಯಮದಂತೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ.

ಯಾವುದೇ ಗೊಂದಲಗಳಿಲ್ಲದೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕುಂದಾಪುರ ಅರಣ್ಯ ಇಲಾಖೆ ಆರ್ ಎಫ್ಒ ಕಿರಣ್ ಬಾಬು ಚುನಾವಣಾ ಅಧಿಕಾರಿಯಾಗಿ, ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಅವರು  ಚುನಾವಣಾ ಕ್ರಮಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪಂಚಾಯಿತಿ ಸರ್ವ ಸದಸ್ಯರು, ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related Articles

Back to top button
error: Content is protected !!