ಗ್ರಾಹಕರ ಸೋಗಿನಲ್ಲಿ ಬಂದು ಮಾಲಕನ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು
Views: 39
ಕನ್ನಡ ಕರಾವಳಿ ಸುದ್ದಿ: ಆಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಮಾಲಕನ ಗಮನಕ್ಕೆ ಬಾರದಂತೆ ಸುಮಾರು 4.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದಿದೆ.
ಮಡಂತ್ಯಾರು ನಿವಾಸಿ ರಾಜೇಶ್ (43) ಎಂಬವರಿಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ಈ ಕೃತ್ಯ ನಡೆದಿದೆ.
ಆಭರಣ ಖರೀದಿಸುವುದಾಗಿ ಅಂಗಡಿಗೆ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು, ಮಾಲಕನ ಗಮನ ಬೇರೆಡೆ ಸೆಳೆದು ಸುಮಾರು 35 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಮರುದಿನ ಬೆಳಿಗ್ಗೆ ಅಂಗಡಿಯಲ್ಲಿ ಚಿನ್ನಾಭರಣಗಳನ್ನು ಜೋಡಿಸುವ ಸಂದರ್ಭದಲ್ಲಿ ಕೆಲವು ಆಭರಣಗಳು ನಾಪತ್ತೆಯಾಗಿರುವುದು ಮಾಲಕರ ಗಮನಕ್ಕೆ ಬಂದಿದೆ.
ಪರಿಶೀಲಿಸಿದಾಗ ಸುಮಾರು 4,40,000 ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ತಿಳಿದು ಬಂದಿದೆ. ಈ ಬಗ್ಗೆ ರಾಜೇಶ್ ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






