ರಾಜಕೀಯ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು  ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಗೆಲುವು?

Views: 86

ಬೆಂಗಳೂರು:ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್‌ 13 ರಂದು ನಡೆದಿದ್ದು, ನವೆಂಬರ್ 23ರಂದು ಪ್ರಕಟವಾಗಲಿರುವ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.ಈ ನಡುವೆ ಕರ್ನಾಟಕದ ಮೂರು ಕ್ಷೇತ್ರದ ಅಚ್ಚರಿ ಸಮೀಕ್ಷೆ ಹೊರಬಿದ್ದಿದೆ.ಇದಕ್ಕೂ ಮೊದಲು ಮೂರು ಕ್ಷೇತ್ರಗಳಿಲ್ಲಿ ಎನ್ಡಿಎ ಹಾಗೂ ಕಾಂಗ್ರೆಸ್ ಎಷ್ಟೆಷ್ಟು ಗೆಲ್ಲಬಹುದು ಎಂದು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಪಿಮಾರ್ಕ್ ಸಮೀಕ್ಷೆ. ಅಚ್ಚರಿಯ ಅಂಕಿ ಅಂಶವನ್ನು ಪ್ರಕಟಿಸಿದೆ.

ಪಿಮಾರ್ಕ್ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಪೈಕಿ ಎನ್ಡಿಎ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನ ಗೆಲ್ಲಲಿದೆ. ಈ ಮೂಲಕ ಚನ್ನಪಟ್ಟಣ ಹಾಗೂ ಶಿಗ್ಗಾಂವಿಯನ್ನು ಜೆಡಿಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ವುಳುವ ಸಾಧ್ಯತೆಗಳಿವೆ. ಇನ್ನು ಸಂಡೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಹಿರಿಯ ಶಾಸಕ ಸಿಪಿ ಯೋಗೇಶ್ವರ್‌ ವಿರುದ್ಧ ಸ್ಪರ್ಧಿಸಿದ್ದು, ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರು ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಸ್ಪರ್ಧಿಸಿದ್ದಾರೆ. ಇನ್ನೂ ಸಂಡೂರಿನಲ್ಲಿ ಬಿಜೆಪಿಯ ಬಂಗಾರು ಹನುಮಂತು ಅವರಿಗೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಕಣಕ್ಕಿಳಿದಿದ್ದರು.

ಈ ಬಾರಿ ಉಪಚುನಾವಣೆ ನಡೆದಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ಈ ಮೊದಲು ಕ್ರಮವಾಗಿ ಜೆಡಿಎಸ್‌, ಬಿಜೆಪಿ, ಕಾಂಗ್ರೆಸ್‌ ಶಾಸಕರಿದ್ದರು. ಅದೇ ರೀತಿ ಈಗ ನಡೆದಿರುವ ಉಪ ಚುನಾವಣೆಯಲ್ಲಿ ಮೂರೂ ಪಕ್ಷಗಳಿಗೆ ಒಂದೊಂದು ಸ್ಥಾನದ ಸಾಧ್ಯತೆ ಬಗ್ಗೆ ಗುಪ್ತಚರ ವಿಭಾಗ ಅಂದಾಜಿಸಿದೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!