ಸಾಂಸ್ಕೃತಿಕ

ಚಲನಚಿತ್ರ, ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಶವ ಹೋಟೆಲ್ ರೂಂನಲ್ಲಿ  ಪತ್ತೆ

Views: 136

ಕನ್ನಡ ಕರಾವಳಿ ಸುದ್ದಿ: ಮಲಯಾಳಂ ಚಲನಚಿತ್ರ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರ ಶವ ಹೋಟೆಲ್ ರೂಂ ಒಂದರಲ್ಲಿ ಪತ್ತೆಯಾಗಿದೆ.

ಕೊಚ್ಚಿಯ ಚೊಟ್ಟನಿಕ್ಕಾರಾದಲ್ಲಿರುವ ಹೋಟೆಲ್‌ನಲ್ಲಿ ನಟ ಶವವಾಗಿ ಪತ್ತೆಯಾಗಿದ್ದಾರೆ. ನವಾಸ್‌ (51) ಸಿನಿಮಾ ಚಿತ್ರೀಕರಣಕ್ಕಾಗಿ ಆಗಮಿಸಿ, ತಾವು ತಂಗಿದ್ದ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೋಟೆಲ್‌ನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ವೈದ್ಯರು ನವಾಸ್ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ.

ನವಾಸ್ ಅವರಿಗೆ ಹೃದಯಾಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಲಾಮಸ್ಸೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button
error: Content is protected !!