ಚಲಿಸುತ್ತಿದ್ದ ರೈಲಿನಿಂದ ಬಿದ್ದ ಕುಮಟದ ವ್ಯಕ್ತಿ ಸವಣೂರಿನಲ್ಲಿ ಮಲಗಿದ ಸ್ಥಿತಿಯಲ್ಲೇ ಪತ್ತೆ

Views: 77
ಕನ್ನಡ ಕರಾವಳಿ ಸುದ್ದಿ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಚಲಿಸುತ್ತಿದ್ದ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಕುಮಟಾದ ವ್ಯಕ್ತಿ ಸವಣೂರಿನಲ್ಲಿ ಮಲಗಿದ ಸ್ಥಿತಿಯಲ್ಲೇ ಪತ್ತೆಯಾಗಿದ್ದಾರೆ.
ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ.
ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು, ನೆಟ್ಟಣ ತಲುಪಿದ ವೇಳೆ ರೈಲ್ವೇ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಪತ್ತೆ ಕಾರ್ಯವೂ ಸಾಧ್ಯವಾಗಿರಲಿಲ್ಲ.
ಮಾ.26ರಂದು ಸುಣ್ಣಾಜೆ ಬಳಿ ಕೊಳವೆಬಾವಿಯ ಪಂಪ್ ಎಳೆಯಲು ಹೋಗಿದ್ದ ದಿನೇಶ್ ಆಚಾರ್ಯ, ಸಂತೋಷ್ ಅಲೆಕ್ಕಾಡಿ, ಪ್ರತಾಪ ಮತ್ತಿತರರಿಗೆ ಮೋರಿ ಸಮೀಪ ವ್ಯಕ್ತಿ ನರಳುವುದು ಕೇಳಿಸಿತು. ಕೂಡಲೇ ಯುವಕನನ್ನು ಆ್ಯಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಮುಖ ಹಾಗೂ ಕೈ ಕಾಲಿಗೆ ಗಂಭೀರ ಗಾಯಗಳಾಗಿವೆ.